Kodagu

ಅಭ್ಯತ್ ಮಂಗಲದಲ್ಲಿ ಗುಂಡೇಟಿಗೆ ವ್ಯಕ್ತಿ ಬಲಿ!

admincoorgdaily

ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಬೆಳೆಗಾರ 

ಗುಂಡೇಟಿಗೆ ಬಲಿಯಾದ ಘಟನೆ ಕುಶಾಲನಗರ ತಾಲ್ಲೂಕಿನ ಅಭ್ಯತ್ ಮಂಗಲ ಗ್ರಾಮದಲ್ಲಿ ನಡೆದಿದೆ .ಕಾಫಿ ಬೆಳೆಗಾರ ಕೊಳಂಬೆ ವಿನು (50)ಮೃತಪಟ್ಟ ವ್ಯಕ್ತಿಯಾಗಿದ್ದು ಸ್ಥಳಕ್ಕೆ ಕೊಡಗು ಮಡಿಕೇರಿ ಪೋಲಿಸರು ಭೇಟಿ ಪರಿಶೀಲನೆ ನಡೆಸಿದರು .ನಂಜರಾಯಪಟ್ಟಣದಲ್ಲಿ ವಾಸವಾಗಿದ್ದ ಬೆಳೆಗಾರ ಕೊಳಂಬೆ ವಿನು.ಅಭ್ಯತ್ ಮಂಗಲ ಗ್ರಾಮದಲ್ಲಿರುವ ತೋಟಕ್ಕೆ ತೆರಳಿದ ವೇಳೆ ದುರ್ಘಟನೆ.ತೋಟದ ಗೋದಾಮಿನಲ್ಲಿ ಪೈಪುಗಳ ಪರಿಶೀಲನೆಗೆ ತೆರಳಿದ ಸಂದರ್ಭ 

ಆರೋಪಿಗಳುಹಿಂಬದಿಯಿಂದ ಗುಂಡು ಹಾರಿಸಿ ಪರಾರಿಯಾಗಿದ್ದಾರೆ.  ಗುಂಡಿಟ್ಟಿನಿಂದ ಗಾಯಗೊಂಡ ವಿನು ರಕ್ತದ ನಡುವಿನಲ್ಲಿ ಸ್ಥಳದಲ್ಲೇ ಕೊನೆ ಉಸಿರುಳಿದಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಗುಂಡಿಟ್ಟು ಶಬ್ದ ಕೇಳಿ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಸ್ಥಳದಲ್ಲೇ ವಿನು ಮೃತಪಟ್ಟಿದ್ದಾರೆ.  ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.ಆಸ್ತಿ ವೈಷಮ್ಯ ಘಟನೆಗೆ ಕಾರಣ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗುಂಡೇಟಿನಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ನೀಡಲಾಗಿದೆ.ಕೊಡಗು ಎಸ್ಪಿ ರಾಮರಾಜನ್ ಸ್ಥಳಕ್ಕೆ ಭೇಟಿ ನೀಡಿ ತನಿಕೆ ಕೈಗೊಂಡು ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡವನ್ನು ರಚಿಸಿದ್ದಾರೆ ಮೃತ ವ್ಯಕ್ತಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ