CRIME

ಅಮಾಯಕ ಯುವಕರ ಮೇಲೆ ಹಲ್ಲೆ: ಬಿಜೆಪಿ ಮುಖಂಡರ ಬಂಧನ

admincoorgdaily

ಮಡಿಕೇರಿ: ಪ್ರವಾಸಿ ತಾಣ ರಾಜಾಸೀಟು ಉದ್ಯಾನದ ಬಳಿ ವಾಹನ ನಿಲುಗಡೆ ಶುಲ್ಕ ವಸೂಲಿ ಮಾಡುವ ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸರು ಮೂವರವನ್ನು ಬಂಧಿಸಿದ್ದಾರೆ.

ಗುರುವಾರ ಸಂಜೆ ಮಡಿಕೇರಿ ನಗರಸಭಾ ಸದಸ್ಯ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ನಾಮನಿರ್ದೇಶಿತ ಸದಸ್ಯ ಕವನ್ ಕಾವೇರಪ್ಪ ಹಾಗೂ ಜಿ.ಆರ್. ಗಿರೀಶ್ ಎಂಬವರುಗಳು ಶುಲ್ಕ ವಸೂಲಿ ಮಾಡುತ್ತಿದ್ದ ಯುವಕರ ಮೇಲೆ ಹಲ್ಲೆ ಮಾಡಿ ಹಣ ಹಾಗೂ ಯಂತ್ರಗಳನ್ನು ಕಸಿದುಕೊಂಡಿರುವುದಾಗಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು ಮೂವರನ್ನು ನಿನ್ನೆ ರಾತ್ರಿ ಬಂದಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮೇರೆಗೆ ನ್ಯಾಯಾಲಯ ಮೂವರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.