ಆಪರೇಷನ್ ಸಿಂಧೂರ್:ಭಾರತೀಯ ಸೇನೆಯ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದ ಸಿ.ಎಂ ಸಿದ್ದರಾಮಯ್ಯ: ಸುದ್ದಿಗೋಷ್ಠಿಯಲ್ಲಿ ಎ.ಎಸ್ ಪೊನ್ನಣ್ಣ ಭಾಗಿ
ಬೆಂಗಳೂರು: ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಕೈಗೊಂಡ ದಾಳಿಗೆ ಹಾಗೂ ದಿಟ್ಟ ಉತ್ತರಕ್ಕೆ, ಇಡೀ ರಾಜ್ಯದ ಜನತೆ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ ಸಿದ್ಧರಾಮಯ್ಯ ರವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಅವರು ನಮ್ಮ ದೇಶದ ರಕ್ಷಣಾ ಪಡೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದಿದ್ದಾರೆ. ನಮ್ಮ ದೇಶದ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಭಾರತದ ಸೈನ್ಯ ಸಿಂಧೂರ್ ಆಪರೇಷನ್ ಮುಖಾಂತರ ಸುಮಾರು 9 ಉಗ್ರಗಾಮಿಗಳ ನೆಲೆಯನ್ನು ನಾಶಪಡಿಸಿದ್ದಾರೆ. ಭಾರತದ ನಡೆಯನ್ನು ಬೆಂಬಲಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಬೈರತಿ ಸುರೇಶ್ ಶ್ರೀ ಪ್ರಿಯಾಂಕ ಖರ್ಗೆ,ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.
