Sports News

ಆಲ್ ಸ್ಟಾರ್ ಕೊಡಗು ವರ್ಲ್ ಕಪ್: BYBFC ಮುಂಬೈ ತಂಡಕ್ಕೆ ಭರ್ಜರಿ ಗೆಲುವು: ಸೆಮಿಫೈನಲ್ ಹಂತಕ್ಕೆ ಪ್ರವೇಶ

admincoorgdaily

ಮಡಿಕೇರಿ:ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಗೋಣಿಕೊಪ್ಪಲಿನ ಆಲ್ ಸ್ಟಾರ್ ಯೂತ್ ಕ್ಲಬ್ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿರುವ ಕೊಡಗು ವರ್ಲ್ಡ್ ಕಪ್ ಆಲ್ ಇಂಡಿಯಾ ಸೂಪರ್ ಫೈವ್ಸ್ ನಾಲ್ಕನೇ ಕ್ವಾಟರ್ ಫೈನಲ್ ಪಂದ್ಯದಲ್ಲಿ BYBFC ಮುಂಬೈ ತಂಡವು 07-03 ಗೋಲುಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದಿದೆ.ಆಕರ್ಷಕ ಆಟದ ಮೂಲಕ 04 ಗೋಲುಗಳನ್ನು ಗಳಿಸಿದ ಸಚಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ಪಡೆದರು.