ಇಂಡೋ-ಪಾಕ್ ನಡುವೆ ಯುದ್ಧದ ಕಾರ್ಮೋಡ: ಹಾರಂಗಿಗೆ ಪ್ರವಾಸಿಗರಿಗೆ ನಿರ್ಬಂಧ!
ವರದಿ: ಕೆ.ಆರ್ ಗಣೇಶ್ ಕೂಡಿಗೆ
ಕುಶಾಲನಗರ:ಭಾರತ- ಪಾಕ್ ದೇಶಗಳ ನಡುವೆ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಉದ್ವಿಗ್ನತೆಯಿಂದ, ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಹಾರಂಗಿ ಪ್ರವಾಸಿ ತಾಣವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಪೈಕಿ ಹಾರಂಗಿ ಅಣೆಕಟ್ಟು ( ಡ್ಯಾಂ ) ಭದ್ರತಾ ದೃಷ್ಟಿಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರವಾಸಿ ಕೇಂದ್ರದ ಬಳಿ ತಾಂತ್ರಿಕ ದೋಷದ ಕಾರಣದಿಂದ ಅನಿರ್ದಿಷ್ಟ ಕಾಲದವರಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಬರೆದು ಹಾಕಲಾಗಿದೆ.
ಬೇಸಿಗೆ ರಜೆ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಆದರೆ, ಈ ಪ್ರವಾಸಿ ಕೇಂದ್ರಗಳಿಗೆ ಪ್ರವೇಶವನ್ನು ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಸ್ಥಳದಿಂದ ವಾಪಾಸ್ಸಾಗುತ್ತಿದ್ದರುವ ದೃಶ್ಯಕಂಡು ಬರುತ್ತಿದೆ.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.ಈ ಪ್ರವಾಸಿ ತಾಣಗಳನ್ನು ದಿಢೀರಾಗಿ ಮುಚ್ಚಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಹಿಂದಿರುಗುತ್ತಿದ್ದಾರೆ.
ಭಾರತ ಮತ್ತು ಪಾಕ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪ್ರಮುಖ ಪ್ರವಾಸಿ ತಾಣಗಳನ್ನು ಭದ್ರತೆ ದೃಷ್ಟಿಯಿಂದ ಮುಚ್ಚಿ ಬಿಗಿ ಭದ್ರತೆ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರವಾಸಿ ಕೇಂದ್ರಗಳನ್ನು ಮುಚ್ಚಲಾಗಿದೆ.
ರಾಜ್ಯ ಸರ್ಕಾರದ ಸೂಚನೆಯಂತೆ ಹಾರಂಗಿ ಅಣೆಕಟ್ಟು ಸುತ್ತಲೂ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.ಪ್ರವಾಸಿಗರಿಗೆ ಹಾರಂಗಿ ಅಣೆಕಟ್ಟೆಯ ಮುಂಭಾಗ ಬೃಂದಾವನ ಹಾಗೂ ಕಾರಂಜಿಯ ವೀಕ್ಷಣೆಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.
ಐ.ಕೆ ಪುಟ್ಟಸ್ವಾಮಿ, ಹಾರಂಗಿ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರು.
