ಏ.29 ರಂದು ಮಡಿಕೇರಿ ನಗರದ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ
admincoorgdaily
ಮಡಿಕೇರಿ :-66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್12 ರಾಜಸೀಟ್ ಫೀಡರ್‍ನಲ್ಲಿ ಏಪ್ರಿಲ್, 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಮಂಗಳೂರು ರಸ್ತೆ, ತಾಳತ್ಮನೆ, ಡಿ.ಸಿ ಕಚೇರಿ, ರಾಜಸೀಟ್ ರಸ್ತೆ, ರೇಸ್‍ಕೋರ್ಸ್ ರಸ್ತೆ, ಇಂದಿರಾನಗರ, ಚಾಮುಂಡೇಶ್ವರಿನಗರ, ಸ್ಟೋನ್ ಹಿಲ್, ಎಲ್.ಐ.ಸಿ ರಸ್ತೆ, ಹೊಸ ಬಡಾವಣೆ, ರಿಮೈಂಡ್ ಹೋಮ್ ಹಿಂಭಾಗ, ಡೈರಿ ಫಾರಂ, ಎಫ್.ಎಂ.ಸಿ ಕಾಲೇಜು ರಸ್ತೆ, ಕನ್ನಿಕಾ ಬಡಾವಣೆ, ಮೈತ್ರಿ ಜಂಕ್ಷನ್, ವಿದ್ಯಾನಗರ, ಮುಳಿಯ ಬಡಾವಣೆ, ಹಿಮವನ ಬಡಾವಣೆ, ಕೋರ್ಟ್ ರಸ್ತೆ, ಜಿಲ್ಲಾ ಪಂಚಾಯತ್ ಕಟ್ಟಡ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.