ಕುಂಜಿಲ: ಕೆ.ಪಿ.ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಕುಂಜಿಲ: ಕೆ.ಪಿ.ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ಕಕ್ಕಬ್ಬೆ- ಕುಂಜಿಲ ಗ್ರಾಮದ ಕೆ ಪಿ. ಬಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025 -26 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಶಾಲೆಯ ಪ್ರವೇಶ ದ್ವಾರದಲ್ಲಿ ಮಕ್ಕಳ ಬರುವಿಕೆಗಾಗಿ ಕಾದು ಕುಳಿತ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹೂ,ಸಿಹಿ ಹಂಚಿ ಮಕ್ಕಳನ್ನು ಸಂತೋಷದಿಂದ ಶಾಲೆಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸವಿತ ರವರು ಹೊಸ ಶೈಕ್ಷಣಿಕ ವರ್ಷಕ್ಕೆ ಸರ್ವರನ್ನು ಸ್ವಾಗತಿಸಿದರು. ಮಕ್ಕಳು ಬಣ್ಣ ಬಣ್ಣದ ಬಲೂನ್ ಹಾರಿಸುವುದರ ಮೂಲಕ 2025-26 ನೇ ಶೈಕ್ಷಣಿಕ ವರ್ಷವನ್ನು ಶುಭಾರಂಭ ಮಾಡಿದರು.ಬಳಿಕ ವಿದ್ಯಾರ್ಥಿಗಳಿಗೆ ಪುಸ್ತಕವಿತರಿಸಲಾಯಿತು.

ಈ ಸಂದರ್ಭ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಫಿಯಾ, ಎಸ್. ಡಿ ಎಂ ಸಿ ಸದಸ್ಯರು ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಸದಸ್ಯರಾದ ಕುಂಡoಡ ರಝಾಕ್,ಪ್ರಭಾರ ಮುಖ್ಯ ಶಿಕ್ಷಕರಾದ ಸವಿತ,ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.