Kodagu

ಕುಶಾಲನಗರ: ಡಾ.ಬಿ ಆರ್ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಸಮಾಜದ ಮುಖಂಡರುಗಳೊಂದಿಗೆ ಸಭೆ ನಡೆಸಿದ ಶಾಸಕ ಡಾ.ಮಂತರ್ ಗೌಡ

admincoorgdaily

ಮಡಿಕೇರಿ:ಕುಶಾಲನಗರದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ರವರ ಭವನ ನಿರ್ಮಾಣ ಕುರಿತು ಮಂಗಳವಾರ ಶಾಸಕರಾದ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಮುಳ್ಳುಸೋಗೆಯಲ್ಲಿರುವ ಶಾಸಕರ ಕಛೇರಿಯಲ್ಲಿ ಸಮಾಜದ ಮುಖಂಡರುಗಳೊಂದಿಗೆ ಸಭೆ ನಡೆಯಿತು. ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ರವರ ಹೆಸರಿನಲ್ಲಿ ಸುಸಜ್ಜಿತವಾದ ಭವನ ನಿರ್ಮಾಣಕ್ಕೆ ಸರ್ವರೂ ಕೈ ಜೋಡಿಸಬೇಕೆಂದು ಶಾಸಕರು ಸಭೆಯಲ್ಲಿ ತಿಳಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹೆಸರಿನಲ್ಲಿ ಪಕ್ಷಾತೀತವಾಗಿ, ರಾಜಕೀಯ ಮಾಡದೆ ಭವನ ನಿರ್ಮಾಣವಾಗಬೇಕೆಂಬುದು ನನ್ನ ಆಶಯವೆಂದು ಶಾಸಕರು ಸಭೆಗೆ ತಿಳಿಸಿದರು. ಸಮಾಜದ ಮುಖಂಡರುಗಳಿಂದ ಅಭಿಪ್ರಾಯ ಸಲಹೆ ಸೂಚನೆಗಳನ್ನು ಈ ಸಂದರ್ಭದಲ್ಲಿ ಪಡೆಯಲಾಯಿತು. ಈ ಸಭೆಯಲ್ಲಿ ಸಮಾಜದ ಮುಖಂಡರುಗಳು, ಚುನಾಯಿತ ಜನಪ್ರತಿನಿಧಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.