ಕೊಡಗು ಜಿಲ್ಲಾ ಮುಸ್ಲಿಂ ಕಪ್ ಕಾಲ್ಚೆಂಡು ಪಂದ್ಯಾವಳಿ: ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ಮಾಡಿದ ಆಯೋಜಕರು
ಮಡಿಕೇರಿ: ಏಪ್ರಿಲ್ 23 ರಿಂದ 27ರವರೆಗೆ ಅಮ್ಮತ್ತಿಯ ಜಿಎಂಪಿ ಶಾಲಾ ಮೈದಾನದಲ್ಲಿ ಕೊಡಗು ಜಿಲ್ಲಾ ಮುಸ್ಲಿಂ ಫುಟ್ಬಾಲ್ ಅಸೋಸಿಯೇಷನ್ ಹಾಗೂ ಅಮ್ಮತ್ತಿ ಫ್ರೆಂಡ್ಸ್ ಸಹಯೋಗದೊಂದಿಗೆ ನಡೆಯಲಿರುವ ಕೊಡಗು ಜಿಲ್ಲಾ ಮಟ್ಟದ ಮುಸ್ಲಿಮ್ ಕಪ್ ಕಾಲ್ಚೆಂಡು ಪಂದ್ಯಾವಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ನವರನ್ನು ಅಮ್ಮತ್ತಿ ಫ್ರೆಂಡ್ಸ್ ಸಮಿತಿ ವಿರಾಜಪೇಟೆಯಲ್ಲಿ ಭೇಟಿ ಮಾಡಿ,ಫುಟ್ಬಾಲ್ ಪಂದ್ಯಾವಳಿಗೆ ಆಹ್ವಾನ ಎಲ್ಲಾ ರೀತಿಯ ಸಹಕಾರ, ಬೆಂಬಲವನ್ನು ಕೋರಿದರು.
ಈ ಸಂದರ್ಭ ಅಮ್ಮತ್ತಿ ಫ್ರೆಂಡ್ಸ್ ಅಧ್ಯಕ್ಷ ಹನೀಫ, ರಂಶೀದ್, ಶೌಕತ್ ಆಲಿ,ವಿರಾಜಪೇಟೆ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಕೆ ಅಬ್ದುಲ್ ಸಲಾಂ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ್ ,ಅಮ್ಮತ್ತಿ-ಕಾರ್ಮಾಡು ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಂ ಹಂಸ ಇದ್ದರು
What's Your Reaction?






