ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ:ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಡಾ ಮಂತರ್ ಗೌಡ ಭೇಟಿ

ಸೋಮವಾರಪೇಟೆ:ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು,ಈ ಹಿನ್ನಲೆಯಲ್ಲಿ ಶಾಸಕ ಡಾ ಮಂತರ್ ಗೌಡ ಅವರು ಕ್ಷೇತ್ರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯಿತಿಗೆ ಸಂಭಂದಪಟ್ಟಂತೆ ಮಳೆಯಿಂದ ವಿದ್ಯುತ್ ಕಂಬ ಹಾನಿಗೀಡಾದ ಪ್ರದೇಶಕ್ಕೆ ಭೇಟಿ ನೀಡಿ, ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದ್ದಾರೆ.ಈ ಸಂದರ್ಭ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್ ಇದ್ದರು.