Kodagu

ಜೂ.09 ರಂದು ಅಂತರಾಷ್ಟ್ರೀಯ ಮಟ್ಟದ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಗೌರವ ಸಮರ್ಪಣೆ

admincoorgdaily

ಮಡಿಕೇರಿ:-ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಸಾಹಿತ್ಯ ಪ್ರಪಂಚದ ಅಂತರಾಷ್ಟ್ರೀಯ ಮಟ್ಟದ ‘ಬೂಕರ್ ಪ್ರಶಸ್ತಿ’ ಪುರಸ್ಕೃತರಾದ ದೀಪಾ ಭಾಸ್ತಿ ಅವರಿಗೆ ಗೌರವ ಸಮರ್ಪಣೆ ಸಮಾರಂಭವು ಜೂನ್, 09 ರಂದು ಬೆಳಗ್ಗೆ 11 ಗಂಟೆಗೆ ನಗರದ ಸತ್ಕಾರ್ ಸಭಾಂಗಣ ಹೋಟೆಲ್ ರೆಡ್‍ಬ್ರಿಕ್ಸ್ ಇಲ್ಲಿ ನಡೆಯಲಿದೆ.  

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ.ಪದ್ಮಾ ಶೇಖರ್, ಸಾಹಿತಿಗಳು ಮತ್ತು ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಭಾಸ್ತಿ, ಹಾಸನದ ಕವಿ ಮತ್ತು ಅನುವಾದಕಿ ಜ.ನಾ.ತೇಜಶ್ರೀ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್, ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಜಿ.ಚಿದ್ವಿಲಾಸ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ಇತರರು ಪಾಲ್ಗೊಳ್ಳಲಿದ್ದಾರೆ.