ನಾಳೆ ಕೊಡಗಿನಲ್ಲಿ ಮತ್ತೊಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ! ಇಲ್ಲಿದೆ ಮಾಹಿತಿ!👇🏻

ನಾಳೆ ಕೊಡಗಿನಲ್ಲಿ ಮತ್ತೊಂದು ಇಂದಿರಾ ಕ್ಯಾಂಟೀನ್ ಉದ್ಘಾಟನೆ!  ಇಲ್ಲಿದೆ ಮಾಹಿತಿ!👇🏻

ಮಡಿಕೇರಿ: ಕುಶಾಲನಗರ ಪುರಸಭೆ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್‍ನ್ನು ಮೇ, 10 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರು ಸಾರ್ವಜನಿಕರ ಉಪಯೋಗಕ್ಕೆ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಶಾಲನಗರ ಪುರಸಭೆ ಅಧ್ಯಕ್ಷರು ಕೋರಿದ್ದಾರೆ.