ನಾಳೆ ಗೋಣಿಕೊಪ್ಪಲಿನಲ್ಲಿ ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್: ಸಾಧಕರಿಗೆ ಸನ್ಮಾನ:
admincoorgdaily
ಮಡಿಕೇರಿ:ಆಲ್ ಸ್ಟಾರ್ ಯೂತ್ ಕ್ಲಬ್ ಗೋಣಿಕೊಪ್ಪ ವತಿಯಿಂದ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಯ ಫುಟ್ಬಾಲ್ ಇತಿಹಾಸದಲ್ಲಿ ಆಲ್ ಇಂಡಿಯಾ ಫೈವ್ಸ್ ಮಾದರಿಯ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿ ಮೇ 01 ರಿಂದ 04ರವರೆಗೆ ಗೋಣಿಕೊಪ್ಪಲಿನ ಜಿಎಂಪಿ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಆಲ್ ಸ್ಟಾರ್ ಯೂತ್ ಕ್ಲಬ್ ಸಲಹೆಗಾರ್ತಿ ಮನೆಯಪಂಡ ಶೀಲಾ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಧಕರಿಗೆ ಸನ್ಮಾನ:
ಆಲ್ ಸ್ಟಾರ್ ಕೊಡಗು ವರ್ಲ್ಡ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಸಾಧಕರಾದ ಸಾಮಾಜಿಕ ಕಾರ್ಯಕರ್ತೆ ಸರಸ್ವತಿ ಪೂವಯ್ಯ,ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಪಾಣತ್ತಲೆ ಜಗದೀಶ್ ಮಂದಪ್ಪ, ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಕಾರ್ಯದರ್ಶಿ ಪಿ.ಎ ನಾಗೇಶ್ (ಈಶ್ವರ್), ಕೊಡಗು ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಮಹಾಪೋಷಕ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ,ಕೊಡಗು ಎಫ್.ಸಿ ಅಧ್ಯಕ್ಷ ಡಾ.ಅಮೃತ್ ನಾಣಯ್ಯ,ಲಿಟಲ್ ಫ್ಲವರ್ ಸಂಸ್ಥೆಯ ದೈಹಿಕ ಶಿಕ್ಷಣ ಮುಖ್ಯಸ್ಥರಾದ ಪ್ರಕಾಶ್ ಎಂ.ಆರ್ ಹಾಗೂ ಕೊಡಗು ಜಿಲ್ಲೆಯ ಫುಟ್ಬಾಲ್ ದಿಗ್ಗಜ ಹಾಗೂ ಚಿಕ್ಕಮಗಳೂರು ಆ್ಯಂಬರ್ ವ್ಯಾಲಿ ಶಾಲೆಯ ತರಬೇತುದಾರ ಅಬೂಬಕರ್ ಉಬೈಸ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದೆಂದು ಆಲ್ ಸ್ಟಾರ್ ಯುವಕ ಸಂಘದ ಸಲಹೆಗಾರ್ತಿ ಮನೆಯಪಂಡ ಶೀಲಾ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.