ಪೊನ್ನಂಪೇಟೆ ಸಿಐಟಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ! :ಪಿರಿಯಾಪಟ್ಟಣ ಮೂಲದ ಯಶ್ವಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

May 30, 2025 - 22:36
 0  574
ಪೊನ್ನಂಪೇಟೆ ಸಿಐಟಿ ಕಾಲೇಜಿನ ವಿದ್ಯಾರ್ಥಿ ಆತ್ಮಹತ್ಯೆ!  :ಪಿರಿಯಾಪಟ್ಟಣ ಮೂಲದ ಯಶ್ವಂತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!

ಪೊನ್ನಂಪೇಟೆ:ಇಲ್ಲಿನ ಸಿ‌ಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಇ.ಎ.ಐ&ಡಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಪಿರಿಯಾಪಟ್ಟಣ ಮೂಲದ ಯಶ್ವಂತ್(20) ಇಂದು ರಾತ್ರಿ ಎಂಟುವರೆ ಗಂಟೆ ಸಮಯದಲ್ಲಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಎರಡು ದಿನಗಳ ಹಿಂದೆ ಸಿಐಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ತೇಜಸ್ವಿನಿ ಎಂಬ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು.ಇದೀಗ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೂರು ದಿನಗಳಲ್ಲಿ ಎರಡು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0