ಬೆಂಗಳೂರು: ಕಾಲ್ತುಳಿತ ಪ್ರಕರಣ‌ ನ್ಯಾಯಾಂಗ ತನಿಖೆಗೆ ಆದೇಶ ಬೆಂಗಳೂರು ನಗರ ಪೊಲೀಸ್ ಕಮೀಷನ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ತಲೆದಂಡ

ಬೆಂಗಳೂರು: ಕಾಲ್ತುಳಿತ ಪ್ರಕರಣ‌ ನ್ಯಾಯಾಂಗ ತನಿಖೆಗೆ ಆದೇಶ   ಬೆಂಗಳೂರು ನಗರ ಪೊಲೀಸ್ ಕಮೀಷನ್ ಸೇರಿ ಹಲವು ಪೊಲೀಸ್ ಅಧಿಕಾರಿಗಳ ತಲೆದಂಡ

  ಬೆಂಗಳೂರು:ಆರ್.ಸಿ.ಬಿ ತಂಡವು ಐಪಿಎಲ್ ಪ್ರಶಸ್ತಿ ಗೆದ್ದ ಹಿನ್ನೆಲೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಕಾಲ್ತುಳಿತದಿಂದಾಗಿ 11 ಮಂದಿ ಸಾವನ್ನಪ್ಪಿದ್ದರು.ಹಾಗೂ 45 ಮಂದಿ ಗಾಯಗೊಂಡಿದ್ದರು.

ಇದೀಗ ಸಚಿವ ಸಂಪುಟದ ಸಭೆಯ ನಂತರ ಸಿ.ಎಂ ಸಿದ್ದರಾಮಯ್ಯ ಅವರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ.ಇದೀಗ ಆರ್.ಸಿ.ಬಿ,ಕೆ.ಎಸ್.ಸಿ.ಎ ಹಾಗೂ DNA ಅವರ ಮೇಲೆ FIR ದಾಖಲು ಮಾಡಲಾಗಿದೆ.ಅದಲ್ಲದೇ ಬೆಂಗಳೂರು ನಗರ ಕಮೀಷನ್ ಸೇರಿ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.