State News

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ: ಮೃತರ ಸಂಖ್ಯೆ 07ಕ್ಕೇರಿಕೆ

admincoorgdaily

ಬೆಂಗಳೂರು: 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್ಸಿಬಿ ವಿಜಯೋತ್ಸವ ನಡೆಯಲಿದ್ದು, ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಟ್ರೋಫಿ ಗೆದ್ದ ತಂಡವನ್ನು 

ಕಣ್ತುಂಬಿಕೊಳ್ಳಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ.20 ಅಧಿಕ ಮಂದಿ ಅಸ್ವಸ್ಥತರಾಗಿದ್ದು ಮೃತರ ಸಂಖ್ಯೆ 07ಕ್ಕೇರಿಕೆಯಾಗಿದೆ.