ಮಂಗಳೂರು ಸರಣಿ ಹತ್ಯೆ ಪ್ರಕರಣ: ಕಮೀಷನರ್ ಹಾಗೂ ಎಸ್‌ಪಿ ಎತ್ತಂಗಡಿ!
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ನೂತನ ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ, ನೂತನ ಎಸ್‌ಪಿ ಯಾಗಿ ಅರುಣ್ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಹಿನ್ನೆಲೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ.
