ಮೇ, 14 ರಂದು ಮಡಿಕೇರಿ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
admincoorgdaily
ಮಡಿಕೇರಿ:ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‍ಆರ್‍ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.