ಮೊಗೇರ ಕ್ರಿಕೆಟ್ ಕಪ್:ಕ್ರೀಡೆಯೊಂದಿಗೆ ಸಮಾಜಮುಖಿ ಚಟುವಟಿಕೆಗಳಲ್ಲಿ ಯುವಜನತೆ ತೊಡಗಿಸಿಕೊಳ್ಳಿ: ಶಾಸಕ ಎ.ಎಸ್ ಪೊನ್ನಣ್ಣ

ಮೊಗೇರ ಕ್ರಿಕೆಟ್ ಕಪ್:ಕ್ರೀಡೆಯೊಂದಿಗೆ  ಸಮಾಜಮುಖಿ ಚಟುವಟಿಕೆಗಳಲ್ಲಿ ಯುವಜನತೆ ತೊಡಗಿಸಿಕೊಳ್ಳಿ: ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ: ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ, ಕೊಡಗು ಜಿಲ್ಲಾ ಮೊಗೇರ ಸಮಾಜದ ವತಿಯಿಂದ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಯ ಅತಿಥಿಯಾಗಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ಭಾಗವಹಿಸಿ ಶುಭ ಕೋರಿದರು.ಮೊಗೇರ ಸಮಾಜದ ಪ್ರಮುಖರ ಆಹ್ವಾನದ ಮೇರೆಗೆ ತೆರಳಿದ ಶಾಸಕರು, ಪಂದ್ಯಾಟದಲ್ಲಿ ಭಾಗವಹಿಸಿದ ಎಲ್ಲಾ ಕ್ರಿಕೆಟ್ ಪಟುಗಳಿಗೆ ಶುಭ ಕೋರಿದರು. ಪ್ರಶಸ್ತಿ ವಿತರಣೆ ಮಾಡುತ್ತ ಮಾತನಾಡಿದ ಮಾನ್ಯ ಶಾಸಕರು ಕ್ರೀಡೆಯಲ್ಲಿ ಗೆಲುವು ಸೋಲು ಸಹಜ. ಎಲ್ಲವನ್ನು ಸಮಾನವಾಗಿ ಸ್ವೀಕರಿಸುವ ಸವಾಲನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡಲ್ಲಿ ಕ್ರೀಡೆಯ ನಿಜವಾದ ಅನುಭವವನ್ನು ಆಸ್ವಾದಿಸಬಹುದು ಎಂದು ಹೇಳಿದರು. ಇಂದಿನ ಯುವಪೀಳಿಗೆಯೂ ಕ್ರೀಡೆಯತ್ತ ಬಹಳ ಆಕರ್ಷಿತವಾಗಿದ್ದು ಇದು ಅತ್ಯಂತ ಒಳ್ಳೆಯ ಬೆಳವಣಿಗೆ. ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರೊಂದಿಗೆ, ಸಮಾಜಮುಖಿಯಾದ ಇನ್ನಿತರ ಚಟುವಟಿಕೆಗಳಲ್ಲೂ ಯುವಜನತೆ ತೊಡಗಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಮೊಗೇರ ಸಮಾಜದ ಅಧ್ಯಕ್ಷರು,ಸದಸ್ಯರು, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್,ಹಾಗೂ ಪ್ರಮುಖರು ಉಪಸ್ಥಿತರಿದ್ದರು.