ರೋಮನ್-ಕ್ಯಾಥೋಲಿಕ್ ಕ್ರಿಕೆಟ್ ಪಂದ್ಯಾಟ:ಶುಭಕೋರಿದ ಯುವ ಕಾಂಗ್ರೆಸ್ ಮುಖಂಡರು

ಸುಂಟ್ಟಿಕೊಪ್ಪ:ರೋಮನ್ -ಕ್ಯಾಥೋಲಿಕ್ ಅಸೋಸಿಯೇಷನ್ ಕೊಡಗು ಜಿಲ್ಲೆ ಹಾಗೂ ಸಂತ ಅಂತೋಣಿಯವರ ದೇವಾಲಯ ಸುಂಟಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟವುಸುಂಟಿಕೊಪ್ಪ ಜಿ ಎಂ ಪಿ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದು ಈ ಪಂದ್ಯಾಟಕ್ಕೆ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ ,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಮ್ ,ಸುಂಟಿಕೊಪ್ಪ ಕಾಫಿ ಬೆಳೆಗಾರರಾದ ಯಂಕನ ಶ್ರೀರಾಮ್ ,ಸುಂಟಿಕೊಪ್ಪ ಗ್ರಾಮ ಪಂಚಾಯತ್ ಸದಸ್ಯ ಸಬಾಸ್ಟೀನ್ ಆಗಮಿಸಿ ಪಂದ್ಯಾಟಕ್ಕೆ ಶುಭ ಕೋರಿದರು.