ವೆಲ್ಡಿಂಗ್ ಕಿಟ್ ವಿತರಿಸಿದ ಡಾ ಮಂತರ್ ಗೌಡ
ಮಡಿಕೇರಿ: ಮಡಿಕೇರಿಯ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ನೋಂದಾಯಿತ ವೇಲ್ಡರಗಳಿಗೆ ನೋಂದಣಿಯ ಹಿರಿತನದ ಆಧಾರದ ಮೇಲೆ ವೆಲ್ಡಿಂಗ್ ಕಿಟ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಕೆಡಿಪಿ ಸಭೆಯ ನಾಮನಿರ್ದೇಶಿತ ಸದಸ್ಯರುಗಳಾದ ಎಂ.ಯು.ಅಬ್ದುಲ್ ರಜಾಕ್, ಮಂದ್ರಿರಾ ಮೋಹನ್ ದಾಸ್, ಶ್ಯಾಮ್ ಸುಬ್ಬಯ್ಯ, ತಹಶೀಲ್ದಾರ್ ಪ್ರವೀಣ್ ಕುಮಾರ್, ತಾ.ಪಂ.ಇಒ ಶೇಖರ್ ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಇದ್ದರು.
