Kodagu

ಸಿದ್ದಾಪುರ: ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ನಿರ್ಧಾರ: ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿ ಬಿಜೆಪಿ ವತಿಯಿಂದ ಪ್ರತಿಭಟನೆ

admincoorgdaily

ಸಿದ್ದಾಪುರ:ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ತೀರ್ಮಾನಕೈಗೊಂಡಿರುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿ ಸಿದ್ದಾಪುರ ಬಿಜೆಪಿ ಶಕ್ತಿ ಕೇಂದ್ರದಿಂದ ಸಿದ್ದಾಪುರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿರುವ ಜನೌಷಧಿ ಕೇಂದ್ರದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಕೇಂದ್ರ ಸರ್ಕಾರವು ಬಡವರ ಏಳಿಗೆಗಾಗಿ, ಹಾಗೂ ಬಡವರ ಆರೋಗ್ಯದಲ್ಲಿ ಏರುಪೇರಾದಾಗ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ನೀಡಲು ದೇಶದಾದ್ಯಂತ ಜನೌಷಧಿ ಕೇಂದ್ರವನ್ನು ಸ್ಥಾಪಿಸಿ ಇಡೀ ದೇಶದಾದ್ಯಂತ ಜನಮನ್ನಣೆಗಳಿಸಿದೆ.ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವು ‌ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು  ಹಾಗೂ ಸ್ಥಳಾಂತರ ಮಾಡಲು ಹೊರಟಿರುವುದು ಸೇಡಿನ ರಾಜಕೀಯವಾಗಿದೆ.ಸೇಡಿನ ರಾಜಕೀಯವನ್ನು ಬಡವರ ಮೇಲೆ ರಾಜ್ಯ ಸರ್ಕಾರ ಪ್ರಯೋಗ ಮಾಡುತ್ತಿದೆ.ರಾಜ್ಯ ಸರ್ಕಾರದ ನಿರ್ಧಾರವನ್ನು ಭಾರತೀಯ ಜನತಾ ಪಕ್ಷ ತೀವ್ರವಾಗಿ ಖಂಡಿಸುತ್ತದೆ.ರಾಜ್ಯ ಸರ್ಕಾರವು ಆಸ್ಪತ್ರೆ ಆವರಣದಲ್ಲಿರುವ ಜನೌಷಧಿ ಕೇಂದ್ರವನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯದಿದ್ದರೆ ಭಾರತೀಯ ಜನತಾ ಪಕ್ಷವು ಮುಂದಿನ ದಿನಗಳಲ್ಲಿ ಉಗ್ರ ರೀತಿಯಲ್ಲಿ ಹೋರಾಟ ಮಾಡುತ್ತೇವೆ ಎಂದು ರಾಬಿನ್ ದೇವಯ್ಯ ಎಚ್ಚರಿಸಿದರು.

 ಈ ಸಂದರ್ಭ, ಶಕ್ತಿ ಕೇಂದ್ರ ಅಧ್ಯಕ್ಷ ರೂಪೇಶ್, ಜಿಲ್ಲಾ ಉಪಾಧ್ಯಕ್ಷ ಕಾಂಗೀರ ಸತೀಶ್, ಪ್ರಮುಖರಾದ ಅನಿಲ್ ಶೆಟ್ಟಿ, ಸೂದನ ಸತೀಶ್, ಹರಿದಾಸ್,ಪ್ರಭು ಶೇಖರ್ ಮತ್ತಿತರರು ಇದ್ದರು.