ಸಿದ್ದಾಪುರ-ಮೈಸೂರು ಮುಖ್ಯ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಸಿದ್ದಾಪುರ-ಮೈಸೂರು ಮುಖ್ಯ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿ

ಸಿದ್ದಾಪುರ:ಸಿದ್ದಾಪುರ -ಮೈಸೂರು ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೆಳಗ್ಗೆ ಭಾರಿ ಗಾತ್ರದ ಮರ ವಿದ್ಯುತ್ ಕಂಬಗಳ ಮೇಲೆ ಬಿದ್ದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಯಾಗಿತ್ತು. ಸ್ಥಳೀಯರು  ಮರವನ್ನು ತೆರವು ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.