ಹರದೂರು: ಕಾಂಕ್ರೀಟ್ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮುಸ್ತಫಾ

ಸುಂಟ್ಟಿಕೊಪ್ಪ:ಹರದೂರು ಗ್ರಾಮ ಪಂಚಾಯಿತಿಗೆ ಒಳಪಡುವ ವಾರ್ಡ್ ಒಂದರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರ ಅನುದಾನದಲ್ಲಿ,ಕಾಂಕ್ರೀಟ್ ರಸ್ತೆ ಕಾಮಗಾರಿ ಪ್ರಗತಿಯಲಿದ್ದು,ರಸ್ತೆ ಕಾಮಗಾರಿಯನ್ನು ವಾರ್ಡ್ ಸದಸ್ಯ ಹಾಗೂ ಹರದೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಎ ಮುಸ್ತಫಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಯಾವುದೇ ಕಾರಣಕ್ಕೂ ಕಾಮಗಾರಿ ಕಳಪೆಯಾಗದಂತೆ ಎಚ್ಚರಿಕೆ ವಹಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.
What's Your Reaction?






