ಹಳೇತಾಲೂಕು: ಬದ್ರಿಯಾ ಮಸೀದಿಯಲ್ಲಿ ಮುಸಲ್ಮಾನ ಬಾಂಧವರಿಂದ ತ್ಯಾಗ ಬಲಿದಾನದ ಬಕ್ರೀದ್ ಆಚರಣೆ
admincoorgdaily
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ಬಳಿಯ ಹಳೇ ತಾಲೂಕಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಮುಸಲ್ಮಾನ ಭಾಂದವರು ತ್ಯಾಗ ಬಲಿದಾನದ ಪವಿತ್ರ ಬಕ್ರೀದ್ ಹಬ್ಬವನ್ನು ಸಂಭ್ರಮ ಆಚರಿಸಿದರು.
ಹಳೇ ತಾಲೂಕು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಖಾಲಿದ್ ಹಿಮಮಿ ಅವರ ನೇತೃತ್ವದಲ್ಲಿ ಸಾಮೂಹಿಕ ಈದ್ ನಮಾಜ್ ನೆರವೇರಿಸಲಾಯಿತು. ಬಳಿಕ ನಾಡಿನಿಂದ ಮೃತಪಟ್ಟವರ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.ಈ ಸಂದರ್ಭ ಜಮಾಅತ್ ಅಧ್ಯಕ್ಷರಾದ ಟಿ. ಎ. ಮಹಮ್ಮದ್, ಕಾರ್ಯದರ್ಶಿ ಅಬ್ದುಲ್ ಖಾದರ್ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು,ಬದ್ರಿಯಾ ಮಸೀದಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು.