ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ!

Jun 3, 2025 - 12:10
 0  45
ಹಾರಂಗಿ ಜಲಾನಯನ ಪ್ರದೇಶಗಳಲ್ಲಿ ಪ್ರವಾಹದ ಮುನ್ನೆಚ್ಚರಿಕೆ!

ಕುಶಾಲನರಗ:ಹಾರಂಗಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಜಲಾಶಯಕ್ಕೆ ಒಳಹರಿವು ಪ್ರಮಾಣ ಹೆಚ್ಚಾಗುತ್ತಿರುವುದರಿಂದ, ಜಲಾನಯನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವದಿಂದ ಜಲಾಶಯದಲ್ಲಿ ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದರಿಂದ ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷತ ಸ್ಥಳಗಳಿಗೆ ತೆರಳಲು ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಪ್ರಕಟಣೆಯಲ್ಲಿ ಕೋರಿಕೊಂಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0