ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮಗಾರಿ ಪರಿಶೀಲನೆ: ಕಾಮಗಾರಿ ಗುಣಮಟ್ಟ ಪಾಲಿಸಲು ಸೂಚನೆ
ಮಡಿಕೇರಿ: ಕಾಮಗಾರಿ ಪ್ರಗತಿಯಲ್ಲಿರುವ ರಸ್ತೆ, ಚರಂಡಿ ವಿದ್ಯುತ್ ಟ್ರಾನ್ಸ್ಫರ್ಮರ್ ಕಾಮಗಾರಿಗಳು ನಡೆಯುತ್ತಿರುವ ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ನೇತಾಜಿ ನಗರಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ,ನಿರ್ದೇಶನದಂತೆ ಮಡಿಕೇರಿ ಬ್ಲಾಕ್ ಅಧ್ಯಕ್ಷರಾದ ಎಚ್.ಎ ಹಂಸ ಕೊಟ್ಟಮುಡಿ ಹಾಗೂ ಮಡಿಕೇರಿ ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಕಾಮಗಾರಿ ಪರಿಶೀಲನೆ ನಡೆಸಿ,ಕಾಮಗಾರಿಯ ಗುಣಮಟ್ಟವನ್ನು ಕಾಪಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸದಾ ಡೆನ್ನಿಸ್, ಪಂಚಾಯತ್ ಮಾಜಿ ಉಪಾಧ್ಯಕ್ಷರು ಹಾಲಿ ಸದಸ್ಯರಾದ ಯೂಸಫ್ ಅಲಿ, ಹಾಗೂ ಗ್ರಾಮಸ್ಥರು ಇದ್ದರು.