ವಿರಾಜಪೇಟೆ-ಗೋಣಿಕೊಪ್ಪ ಮುಖ್ಯರಸ್ತೆ ಅಭಿವೃದ್ಧಿಗೆ ₹1.32 ಕೋಟಿ; ಶಾಸಕ ಪೊನ್ನಣ್ಣರಿಂದ ಭೂಮಿಪೂಜೆ
admincoorgdaily

ವಿರಾಜಪೇಟೆ: ವಿರಾಜಪೇಟೆಯಿಂದ ಗೋಣಿಕೊಪ್ಪಲಿಗೆ ತೆರಳುವ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಪ್ರತಿದಿನ ಸಾವಿರಾರು ಜನರು ಮತ್ತು ವಾಹನಗಳು ಸಂಚರಿಸುವ ಈ ರಸ್ತೆಯನ್ನು ಉತ್ತಮ ಗುಣಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ₹1 ಕೋಟಿ 32 ಲಕ್ಷ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ವಾಹನ ಸವಾರರು ಮತ್ತು ಸಾರ್ವಜನಿಕರಿಗೆ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಉದ್ದೇಶ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದ್ದು, ರಸ್ತೆ ನಿರ್ಮಾಣದ ವೇಳೆ ಸಾರ್ವಜನಿಕರು ಸಹಕರಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಗರ ಅಧ್ಯಕ್ಷ ಮಾಳೇಟೀರ ಬೋಪಣ್ಣ, ಮಾಜಿ ಅಧ್ಯಕ್ಷ ಮಾದಂಡ ತಿಮ್ಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕಾಳಮಂಡ ನೈನಾ ಜಗತ್, ಪುರಸಭೆ ಮಾಜಿ ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಬಗರ್ ಹುಕುಂ ಅಧ್ಯಕ್ಷ ಸಲೀಂ, ಅಲ್ಪಸಂಖ್ಯಾತರ ಅಧ್ಯಕ್ಷ ರಫೀಕ್, ಬ್ಲಾಕ್ ಉಪಾಧ್ಯಕ್ಷ ಜೋಕಿಮ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಪೃಥ್ವಿನಾಥ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಿತ್ ಚಂಗಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶಬೀರ್ ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಪುರಸಭೆ ಮುಖ್ಯಾಧಿಕಾರಿ ನಾಚಪ್ಪ ಉಪಸ್ಥಿತರಿದ್ದರು.