ಸತತ ನಾಲ್ಕು ವರ್ಷ ಶೇ.100 ಫಲಿತಾಂಶ: ಸೇಂಟ್ ಆಂಟೋನೀಸ್ ಪಿಯು ಕಾಲೇಜಿಗೆ ಸನ್ಮಾನ
ಪೊನ್ನಂಪೇಟೆ: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪರೀಕ್ಷೆಗಳಲ್ಲಿ 2022ರಿಂದ 2026ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಶೇ.100 ಫಲಿತಾಂಶ ದಾಖಲಿಸಿ ವಿಶಿಷ್ಟ ಸಾಧನೆಗೈದ ಪೊನ್ನಂಪೇಟೆಯ ಸೇಂಟ್ ಆಂಟೋನೀಸ್ ಪಿಯು ಕಾಲೇಜನ್ನು ಸನ್ಮಾನಿಸಿ ಗೌರವಿಸಲಾಯಿತು.
ಕೊಡಗು ಜಿಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಕೊಡಗು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ವತಿಯಿಂದ ಕಾಲೇಜಿನ ಪರವಾಗಿ ಪ್ರಾಂಶುಪಾಲ ಚೆಟ್ಟಂಗಡ ಶಂಭು ಕಾರ್ಯಪ್ಪ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಂಭು ಕಾರ್ಯಪ್ಪ, ಸತತ ನಾಲ್ಕು ವರ್ಷಗಳ ಕಾಲ ಶೇ.100 ಫಲಿತಾಂಶ ದಾಖಲಿಸಿರುವುದು ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಸಮರ್ಪಿತ ಬೋಧನೆ ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಮಾರ್ಗದರ್ಶನದ ಫಲವಾಗಿದೆ ಎಂದು ತಿಳಿಸಿದರು.
ಕಾಲೇಜಿನ ಈ ಸಾಧನೆಗೆ ಫಾದರ್ ಮ್ಯಾನುವಲ್ ಡಿಸೋಜ ಹಾಗೂ ಆಡಳಿತ ಮಂಡಳಿಯವರು ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಶಕ್ತಿ ಸಂಪಾದಕ ಚಿದ್ವಿಲಾಸ್, ಡಿಡಿಪಿಯುಇ ಗಣಪತಿ, ಪಿಯು ಕಾಲೇಜುಗಳ ಪ್ರಾಂಶುಪಾಲರ ಸಂಘದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
