ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ "ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನ:ಕುಶಾಲನಗರ ತಾಲ್ಲೂಕಿನ ವಿವಿಧೆಡೆಗಳಲ್ಲಿ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ
ಮಡಿಕೇರಿ:ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ ಪ್ರಕಾಶ್ ಮೀನಾ ರವರು ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದ ಕುರಿತು 15 ದಿನಗಳ "ಕ್ಷೇತ್ರ ಭೇಟಿ ಪರಿಶೀಲನಾ ಆಂದೋಲನ" ದ ಅಂಗವಾಗಿ ಇತ್ತೀಚಿಗೆ ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ , ಏಳನೇ ಹೊಸಕೋಟೆ, ನಂಜರಾಯಪಟ್ಟಣ ಗ್ರಾಮಗಳಿಗೆ ಭೇಟಿ ನೀಡಿ ಜೆಜೆಎಂ ಕಾಮಗಾರಿಯಡಿ ಅಳವಡಿಸಿರುವ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ ಹಾಗೂ , ಗ್ರಾಮ ಪಂಚಾಯಿತಿಗಳಲ್ಲಿ - ನೀರಿನ ಗುಣಮಟ್ಟ ಸೇರಿದಂತೆ ವಿವಿಧ ವಿಷಯಗಳ ಕುರಿತು ವರದಿಗಳನ್ನು ಪರಿಶೀಲಿಸಿದರು
. ಗ್ರಾಮಗಳಲ್ಲಿನ ಶಾಲೆ, ಗ್ರಂಥಾಲಯ ಮತ್ತು ಅಂಗನವಾಡಿಗಳಿಗೆ ಭೇಟಿ ನೀಡಿದರು. ನಂತರ ಗ್ರಾಮಗಳಲ್ಲಿರುವ ಕುಡಿಯುವ ನೀರಿನ ಯೋಜನೆಯ ನೀರು ಶುದ್ದಿಕರಣ ಘಟಕಗಳು, ಹಾಗೂ ನೀರು ಶೇಖರಣ ತೊಟ್ಟಿಗಳಿಗೆ ಬೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಗ್ರಾ ಕು ನೀ ನೈ ವಿಭಾಗ, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯಿತಿ , ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ/ ಕಿರಿಯ ಅಭಿಯಂತರರು, ಜಿಲ್ಲಾ ಯೋಜನೆ ಸ್ಥಾಪಕರು, ಜಿಯಾಲಜಿಸ್ಟ್, ಸಪೋರ್ಟ್ ಇಂಜಿನಿಯರ್ ಗಳು ಹಾಗೂ ಗ್ರಾಮ ಪಂಚಾಯತಿ ಪಿಡಿಒ ಗಳು, ಅಧ್ಯಕ್ಷರು, ಸದಸ್ಯರು, ನೀರುಗಂಟಿಗಳು ಹಾಜರಿದ್ದರು.