Kodagu

ವಿರಾಜಪೇಟೆಯಲ್ಲಿ ಸೆ.26 ರಂದು ಶಾಲೆಗಳಿಗೆ ರಜೆ ಘೋಷಣೆ

admincoorgdaily

ವಿರಾಜಪೇಟೆಯಲ್ಲಿ ಸೆ.26 ರಂದು ಶಾಲೆಗಳಿಗೆ ರಜೆ ಘೋಷಣೆ
ವಿರಾಜಪೇಟೆ:ಗೌರಿ ಗಣೇಶ ವಿಸರ್ಜನಾ ಮಹೋತ್ಸವದ ಹಿನ್ನೆಲೆಯಲ್ಲಿ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಶಾಲೆಗಳಿಗೆ ಸೆಪ್ಟೆಂಬರ್ 26ರ ಶನಿವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆದೇಶ ಹೊರಡಿಸಿದೆ.

ಸೆ.25ರ ರಾತ್ರಿ ವಿರಾಜಪೇಟೆ ನಗರದಲ್ಲಿ ಐತಿಹಾಸಿಕ ಗೌರಿ ಗಣೇಶ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಾಗವಹಿಸುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಯಾವ ಶಾಲೆಗಳಿಗೆ ರಜೆ?

ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 1ನೇ ತರಗತಿಯಿಂದ 9ನೇ ತರಗತಿವರೆಗೆ ಸ್ಥಳೀಯ ರಜೆ ಇರಲಿದೆ.

10ನೇ ತರಗತಿ ವಿದ್ಯಾರ್ಥಿಗಳಿಗೆ ಮಂಡಳಿಯ ವೇಳಾಪಟ್ಟಿಯಂತೆ ಎಸ್.ಎಸ್.ಎಲ್.ಸಿ SA1 ಪರೀಕ್ಷೆ ಎಂದಿನಂತೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.