ಮಡಿಕೇರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಅಕ್ಟೋಬರ್ 2 ರಂದು ಸೈಕ್ಲಥಾನ್
admincoorgdaily

ಮಡಿಕೇರಿ:ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ ವನ್ಯಜೀವಿ ಸಪ್ತಾಹದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ವತಿಯಿಂದ ಅಕ್ಟೋಬರ್ 2 ರಂದು ಸೈಕ್ಲಥಾನ್ ಹಮ್ಮಿಕೊಳ್ಳಲಾಗಿದೆ.
ಪ್ರವಾಸೋದ್ಯಮ ಇಲಾಖೆ, ಅರಣ್ಯ ಇಲಾಖೆ, ಕ್ಲೀನ್ ಕೂರ್ಗ್ ಇನಿಶಿಯೇಟಿವ್ ಮತ್ತು ಗ್ರೀನ್ ಫಾರಂ ಮಡಿಕೇರಿ ಇವರ ಸಂಯುಕ್ತಾಶ್ರಯದಲ್ಲಿ "Zero Waste Travel to Kodagu District" ಎಂಬ ಘೋಷವಾಕ್ಯದೊಂದಿಗೆ ಈ ಸೈಕ್ಲಥಾನ್ ನಡೆಯಲಿದೆ.
ಅಕ್ಟೋಬರ್ 2 ರಂದು ಬೆಳಿಗ್ಗೆ 8 ಗಂಟೆಗೆ ಮಡಿಕೇರಿಯ ಅರಣ್ಯ ಭವನದಿಂದ ಸೈಕ್ಲಥಾನ್ ಆರಂಭವಾಗಲಿದ್ದು, ಸಾಲುಮರದ ತಿಮ್ಮಕ್ಕ ಟ್ರೀ ಪಾರ್ಕ್ ವರೆಗೆ ಸಾಗಲಿದೆ.
ಕೊಡಗನ್ನು ಸ್ವಚ್ಛ ಮತ್ತು ಹಸಿರಾಗಿಡುವ ಸಂದೇಶದೊಂದಿಗೆ ನಡೆಯಲಿರುವ ಈ ಸೈಕ್ಲಥಾನ್ ನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.