ಹಾರಂಗಿ ಜಲಾಶಯದಿಂದ 3000 ರಿಂದ 5000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ:ಮುನ್ನೆಚ್ಚರಿಕೆ ವಹಿಸಲು ಸೂಚನೆ

Jul 24, 2026 - 14:42
 0  146
ಹಾರಂಗಿ ಜಲಾಶಯದಿಂದ 3000 ರಿಂದ 5000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ:ಮುನ್ನೆಚ್ಚರಿಕೆ ವಹಿಸಲು ಸೂಚನೆ

ಕುಶಾಲನಗರ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವಿದ್ದು, ಜಲಾಶಯಕ್ಕೆ ಒಳಹರಿವು ಇನ್ನಷ್ಟು ಹೆಚ್ಚಾಗಬಹುದು.

ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಕಾರಣ 25-7-2026 ರ ಮಧ್ಯಾಹ್ನ 2.00 ಗಂಟೆಯ ನಂತರ ಸುಮಾರು 3000 ಕ್ಯೂಸೆಕ್ ನಿಂದ 5000 ಕ್ಯೂಸೆಕ್ ವರೆಗೆ ನೀರನ್ನು ನದಿಗೆ ಹರಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದಲ್ಲಿರುವ ಹಾಗೂ ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಅಭಿಯಂತರ ಮಹೇಶ್ ಎಂ.ಎನ್ ಅವರು ಮನವಿ ಮಾಡಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0