ನಾಪೋಕ್ಲು ನಾಲ್ಕುನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ; ಶಾಸಕ ಎ.ಎಸ್.ಪೊನ್ನಣ್ಣ ಭಾಗಿ
admincoorgdaily

ನಾಪೋಕ್ಲು: ಮಡಿಕೇರಿ ತಾಲೂಕು ನಾಪೋಕ್ಲು ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘ(ರಿ) ಹಾಗೂ ವಾಹನ ಚಾಲಕರ ಸಂಘ ನಾಪೋಕ್ಲು(ರಿ) ವತಿಯಿಂದ 34ನೇ ವರ್ಷದ ಅದ್ದೂರಿ ಆಯುಧ ಪೂಜಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ರವರು ಪೂಜಾ ವಿಧಾನದಲ್ಲಿ ಭಾಗವಹಿಸಿ ಶುಭ ಕೋರಿದರು.
ಆಯೋಜಕರ ಆಮಂತ್ರಣದ ಮೇರೆಗೆ ಪೂಜೆಯಲ್ಲಿ ಭಾಗವಹಿಸಿದ ಶಾಸಕರು, ವಾಹನ ಚಾಲಕರ ಕೋರಿಕೆಯಂತೆ ಆಯುಧ ಪೂಜೆ ಬಳಿಕ ವಾಹನವನ್ನು ಚಲಾಯಿಸುವ ಮೂಲಕ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ನಾಲ್ಕುನಾಡು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಪಿ.ಸುಕುಮಾರ್, ನಾಪೋಕ್ಲು ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೊಟ್ಟಮುಡಿ ಹಂಸ, ನಾಪೋಕ್ಲು ಬ್ಲಾಕ್ ಮಾಜಿ ಅಧ್ಯಕ್ಷ ಇಸ್ಮಾಯಿಲ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ವಲಯ ಅಧ್ಯಕ್ಷ ಕುಶಾಲಪ್ಪ, ವಕೀಲರು ಹಾಗೂ ಸಂಘದ ಕಾನೂನು ಸಲಹೆಗಾರ ಪವನ್ ಪೆಮ್ಮಯ್ಯ, ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ, ಮಾಜಿ ಸದಸ್ಯರಾದ ಅರುಣ್ ಬೇಬ್, ಹೇಮಾವತಿ, ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ವಲಯ ಕಾಂಗ್ರೆಸ್ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪಕ್ಷದ ಮುಖಂಡರಾದ ಬೋಳಚೇಟ್ಟಿರ ಸುರೇಶ್, ಮುತ್ತಪ್ಪ, ಕಾಳಿಮಾಡ ದೀಪು ಸುಬ್ಬಯ್ಯ, ಕುಂಡಚ್ಚಿರ ಮಂಜು ದೇವಯ್ಯ, ಉದಯ ಮಾದಪ್ಪ, ಯುವ ಕಾಂಗ್ರೆಸ್ನ ನಿರೂಪ್ ಸೇರಿದಂತೆ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.