ಜ.14ರಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ 36ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವ
admincoorgdaily

ಮಡಿಕೇರಿ: ೩೬ನೇ ವರ್ಷದ ಮಕರ ಸಂಕ್ರಾಂತಿ ಮಹೋತ್ಸವವನ್ನು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸಮಿತಿ ವತಿಯಿಂದ ದೇವಾಲಯದ ಆವರಣದಲ್ಲಿ ಜ.೧೪ ರಂದು ಹಮ್ಮಿಕೊಳ್ಳಲಾಗಿದೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ.
ಜ.೧೩ರಂದು ಬೆಳಗ್ಗೆ ೮ ಗಂಟೆಗೆ ಗಣಪತಿ ಹೋಮ, ಜ.೧೪ರಂದು ಬೆಳಗ್ಗೆ ೬.೩೦ ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಉಷಾಪೂಜೆ, ನಂತರ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರ ಪೂಜೆ, ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ ಇತ್ಯಾದಿ ನಡೆಯಲಿದೆ. ಅಂದಿನ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಕಾರಣರಾಗಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೇವಾಲಯ ಸಮಿತಿ ಮತ್ತು ಉತ್ಸವ ಸಮಿತಿ ಪ್ರಮುಖರಾದ ಡಾ.ಮನೋಹರ್.ಜಿ.ಪಾಟ್ಕರ್, ವಿ.ಎಸ್.ವಿನೋದ್, ಜಯಂತಿ ಶೆಟ್ಟಿ, ಸದಾಶಿವ ಶೆಟ್ಟಿ, ಪೂವಪ್ಪ ಉಪಸ್ಥಿತರಿದ್ದರು.