ಡಾ.ಬಾಬು ಜಗಜೀವನ್ ರಾಂ ಅವರ 40ನೇ ಪುಣ್ಯಸ್ಮರಣೆ
ಮಡಿಕೇರಿ:ಜು.06-ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತೀಯ ಹರಿಕಾರ ಡಾ.ಬಾಬು ಜಗಜೀವನ್‍ರಾಂ ಅವರ 40 ನೇ ಪುಣ್ಯಸ್ಮರಣಾ ಕಾರ್ಯಕ್ರಮವು ಸೋಮವಾರ ಸರಳವಾಗಿ ಆಚರಿಸಲಾಯಿತು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ, ನಗರಸಭೆ ಸದಸ್ಯರಾದ ಸತೀಶ್, ಡಿಎಸ್‍ಎಸ್ ಜಿಲ್ಲಾ ಸಂಚಾಲಕರಾದ ದಿವಾಕರ, ದೀಪಕ್ ಪೊನ್ನಪ್ಪ, ಮೋಹನ್ ಮೌರ್ಯ, ಪ್ರೇಮ ಕೃಷ್ಣಪ್ಪ, ಜನಾರ್ಧನ, ಇತರರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಬಾಬು ಜಗಜೀವನ್ ರಾಂ ಅವರು ಕೇಂದ್ರದಲ್ಲಿ ಆಹಾರ ಸಚಿವರಾಗಿ ‘ಹಸಿರು ಕ್ರಾಂತಿ’ ಜಾರಿಗೊಳಿಸಿದರು ಎಂದು ಹೇಳಿದರು. ಬಡವರ ಏಳಿಗೆಗೆ ಶ್ರಮಿಸಿದ ಬಾಬು ಜಗಜೀವನ್ ರಾಂ ಅವರು ಸಮಾಜದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಆಹಾರ, ಕಾರ್ಮಿಕ, ರಕ್ಷಣಾ ಸಚಿವರಾಗಿ ಹಲವು ಮಹತ್ತರ ಕಾರ್ಯಗಳನ್ನು ಕೈಗೊಂಡು ರಾಷ್ಟ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ನುಡಿದರು. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಎಚ್.ಎಲ್.ದಿವಾಕರ ಅವರು ಮಾತನಾಡಿ ದೇಶದ ಪ್ರಗತಿಯಲ್ಲಿ ಎಲ್ಲರ ಪ್ರಗತಿ ಇದೆ, ಪ್ರತಿಯೊಬ್ಬರ ಉದ್ದಾರದಲ್ಲಿಯೇ ಎಲ್ಲರ ಅಭಿವೃದ್ಧಿ ಇದೆ ಎಂದು ಬಾಬು ಜಗಜೀವನ್ ರಾಂ ಅವರು ಸಾರಿದ್ದಾರೆ ಎಂದು ತಿಳಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

