Kodagu

ಮಡಿಕೇರಿ ನಗರಸಭೆ ಆಯುಕ್ತರಿಗೆ ಲೋಕಾ ಶಾಕ್! ಮನೆಯಲ್ಲಿ ಸಿಕ್ತು 4.5 ಲಕ್ಷ ಕ್ಯಾಶ್, 350 ಗ್ರಾಂ GOLD!

admincoorgdaily

ಮನೆಯಲ್ಲಿ ಪರಿಶೀಲನೆ
ಮಡಿಕೇರಿ :-ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಡಿಕೇರಿ ನಗರಸಭೆ ಪೌರಾಯುಕ್ತ ಎಚ್.ಆರ್. ರಮೇಶ್ ಅವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ರಾಜ್ಯದ ಒಟ್ಟು 8 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಅದರ ಭಾಗವಾಗಿ ಮಡಿಕೇರಿಯಲ್ಲೂ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದ ತಂಡ ಬೆಳಗ್ಗೆ 6 ಗಂಟೆಯಿಂದಲೇ ಮನೆ ಮತ್ತು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದೆ.

ದಾಳಿ ವೇಳೆ ಮನೆಯಲ್ಲಿ ಸುಮಾರು 4.50 ಲಕ್ಷ ರೂ. ನಗದು, 350 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಆಸ್ತಿ ದಾಖಲೆಗಳು, ಬ್ಯಾಂಕ್ ಖಾತೆ ವಿವರಗಳು, ನಗರಸಭೆ ಕಾಮಗಾರಿಗಳ ಕಡತಗಳನ್ನು ವಶಕ್ಕೆ ಪಡೆಯಲಾಗಿದೆ.
ನಗರಸಭೆ ಕಚೇರಿಯಲ್ಲಿ ಕಾಮಗಾರಿಗಳಿಗೆ ಸಂಬಂಧಿಸಿದ ಫೈಲ್‌ಗಳ ತೀವ್ರ ಪರಿಶೀಲನೆ ನಡೆದಿದ್ದು, ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.