ವಿರಾಜಪೇಟೆ;ಗೌರಿ-ಗಣೇಶ ವಿಸರ್ಜನಾ ಶೋಭಾಯಾತ್ರೆಯಲ್ಲಿ ಆಕಸ್ಮಿಕ ದುರಂತ;ತೇರಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ, 4 ಮಂದಿಗೆ ಗಾಯ
admincoorgdaily

ವಿರಾಜಪೇಟೆ: ವಿರಾಜಪೇಟೆಯಲ್ಲಿ ಗೌರಿ-ಗಣೇಶ ವಿಸರ್ಜನಾ ಶೋಭಾಯಾತ್ರೆ ವೇಳೆ ಭಾರೀ ಅನಾಹುತ ಸಂಭವಿಸಿದೆ. ಮೆರವಣಿಗೆ ಸಾಗುತ್ತಿದ್ದ ವೇಳೆ ಅಲಂಕೃತ ತೇರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಗಾಯಗೊಂಡವರಲ್ಲಿ ಬಸವರಾಜು ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮೂಲದ ಮತ್ತಿಬ್ಬರು ಗಾಯಾಳುಗಳನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.