ಹುದಿಕೇರಿಗೆ 50 ಹಾಸಿಗೆಗಳ ಆಸ್ಪತ್ರೆ;ಕಾಮಗಾರಿ ಪರಿಶೀಲಿಸಿದ ಶಾಸಕ ಪೊನ್ನಣ್ಣ
admincoorgdaily

ಪೊನ್ನಂಪೇಟೆ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಭಾಗಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಅಧಿಕೃತ ಪ್ರವಾಸ ಕೈಗೊಂಡರು.
ಈ ಸಂದರ್ಭದಲ್ಲಿ, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ಸರ್ಕಾರದಿಂದ ಮಂಜೂರಾಗಿರುವ 50 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ಅಲ್ಲದೆ, ಸ್ಥಳದಲ್ಲಿದ್ದ ಇಂಜಿನಿಯರ್ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಮಗಾರಿಯ ಪ್ರಗತಿಯ ಕುರಿತು ಮಾಹಿತಿ ಪಡೆದು, ನಿಗದಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಅಧ್ಯಕ್ಷರಾದ ಚಂಗುಲಂಡ ಸೂರಜ್, ಬೂತ್ ಅಧ್ಯಕ್ಷರಾದ ಮಂದಣ್ಣ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷರಾದ ಅಣ್ಣಳ್ಳಮಾಡ ಅಪ್ಪಣ್ಣ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೆಕ್ಕೇರ ವಾಸು ಕುಟ್ಟಪ್ಪ ಹಾಗೂ ಸುಧೀರ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಪಮ್ಮು, ನೂರೇರ ರಮೇಶ್, ಮನೋಹರ್, ಕಿಟ್ಟು, ಕಾವೇರಪ್ಪ, ಲೋಕನಾಥ್, ರಬಿ, ಬಿಪಿನ್, ಹುದಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ರೀಕ್ಷಿತ್ ಕಾರ್ಯಪ್ಪ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.