Kodagu

ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತ ಶೇ.50 ರಷ್ಟು ರಿಯಾಯಿತಿ

admincoorgdaily

ಸಾಂದರ್ಭಿಕ ಚಿತ್ರ
ಮಡಿಕೇರಿ:-ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಅನ್ವಯವಾಗುವಂತೆ ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡ ಮತ್ತು ಸಾರಿಗೆ ಇಲಾಖೆಯಲ್ಲಿ 1991 ರಿಂದ 2025 ರವರೆಗೆ ವಿಧಿಸಿದ ದಂಡದ ಮೊತ್ತದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರವು ಆದೇಶ ಹೊರಡಿಸಿರುತ್ತದೆ. 

ಈ ರಿಯಾಯಿತಿಯು 2026 ರ ನವೆಂಬರ್, 21 ರಿಂದ 2026 ರ ಡಿಸೆಂಬರ್, 11 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ.