Kodagu

ಮದೆ ಗ್ರಾಮದಲ್ಲಿ 6ನೇ ವರ್ಷದ ನವರಾತ್ರಿ ಉತ್ಸವ - ಶಾಸಕ ಎ.ಎಸ್.ಪೊನ್ನಣ್ಣ ಭಾಗಿ

admincoorgdaily

ಮದೆ ಗ್ರಾಮದಲ್ಲಿ 6ನೇ ವರ್ಷದ ನವರಾತ್ರಿ ಉತ್ಸವ - ಶಾಸಕ ಎ.ಎಸ್.ಪೊನ್ನಣ್ಣ ಭಾಗಿ
ಮಡಿಕೇರಿ:ಮಡಿಕೇರಿ ತಾಲೂಕಿನ ಮದೆ ಗ್ರಾಮದ ದೇವರ ಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನ (ರಿ) ವತಿಯಿಂದ ಆಯೋಜಿಸಿದ್ದ 6ನೇ ವರ್ಷದ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ದೇವರಕೊಲ್ಲಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಆವರಣದಲ್ಲಿ ದಸರಾ ಮಹೋತ್ಸವ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪೊನ್ನಣ್ಣ, ತಾವು ಕಳೆದ ಸಾಲಿನ ದಸರಾ ಉತ್ಸವದಲ್ಲೂ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದನ್ನು ನೆನಪಿಸಿಕೊಂಡರು.

"ಈ ಭಾಗದ ಸ್ಥಳೀಯ ಪ್ರತಿಭೆಗಳಿಗೆ ತಮ್ಮ ಕಲಾಪ್ರದರ್ಶನ ನೀಡಲು ಈ ದಸರಾ ಉತ್ಸವ ವೇದಿಕೆ ಕಲ್ಪಿಸಿರುವುದು ತುಂಬಾ ಸಂತೋಷ ನೀಡಿದೆ. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯ ಕಲಾವಿದರು ಇಲ್ಲಿ ಜನರನ್ನು ರಂಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ" ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಡಿಸಿಸಿ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಪಕ್ಷದ ಮುಖಂಡರು ಸೂರಜ್ ಹೊಸೂರು, ಸುರೇಶ್, ರವಿ ರಾಜ್ ಹೊಸೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.