Kodagu

ಮಡಿಕೇರಿಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

admincoorgdaily

ಮಡಿಕೇರಿಯಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

ಮಡಿಕೇರಿ:- ಕೊಡಗು ಜಿಲ್ಲಾಡಳಿತ ವತಿಯಿಂದ 71 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು  ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾನುವಾರ ಅರ್ಥಪೂರ್ಣವಾಗಿ ನಡೆಯಿತು. 

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರಸ್ವಾಮಿ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
     ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ, ತಹಶಿಲ್ದಾರರು, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.