ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Jan 30, 2026 - 10:34
 0  228
ಕಂಡಂಗಾಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

ವಿರಾಜಪೇಟೆ:ಕಂಡಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಹಾಗೂ ದೇಶಭಕ್ತಿಯಿಂದ ಆಚರಿಸಲಾಯಿತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಕೆಂಜೇಂಗಡ ಗಣಪತಿ ಅವರು ಧ್ವಜಾರೋಹಣ ನೆರವೇರಿಸಿದರು.

 ನಂತರ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ಹಾಗೂ ಸಾಮೂಹಿಕ ಕವಾಯತು ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಡಗು ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ನಾಸಿರ್ ಮಾತನಾಡಿ, ಕಂಡಂಗಾಲ ಶಾಲೆಯ ಶೈಕ್ಷಣಿಕ ವಾತಾವರಣವು ಮಾದರಿಯಾಗಿದ್ದು, ಇಲ್ಲಿನ ವಿದ್ಯಾರ್ಥಿಗಳ ಶಿಸ್ತು ಹಾಗೂ ಶಿಕ್ಷಕರ ಕಾರ್ಯದಕ್ಷತೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಮುಲ್ಲೇಂಗಡ ಶಂಕರಿ ಪೊನ್ನಪ್ಪ ಅವರು ಗಣರಾಜ್ಯೋತ್ಸವದ ಪ್ರಾಮುಖ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಮಾಜಿ ಸೈನಿಕ ಹಾಗೂ ಕ್ರೀಡಾ ಸಮಿತಿಯ ಮಾಜಿ ಅಧ್ಯಕ್ಷ ಕೊಂಗಂಡ ಡಬ್ಲ್ಯೂ ಭೀಮಯ್ಯ ಅವರು ಮಾತನಾಡಿ, ಸ್ಥಳೀಯ ಶಿಕ್ಷಣ ಸಂಸ್ಥೆಗಳು ನಮ್ಮನ್ನು ಗುರುತಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹರ್ಷ ವ್ಯಕ್ತಪಡಿಸಿದರು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಅತಿಥಿಗಳು ಬಹುಮಾನ ವಿತರಿಸಿದರು.

 ಇದೇ ಸಂದರ್ಭ ಶಾಲೆಯ ಅಭಿವೃದ್ಧಿಗೆ ನೆರವಾದ ದಾನಿಗಳನ್ನು ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಕ್ರೀಡಾ ಸಮಿತಿ ಅಧ್ಯಕ್ಷ ಬಲ್ಲಡಿಚಂಡ ರವಿ ಸೋಮಯ್ಯ, ದಾನಿಗಳಾದ ಕೊಲತಂಡ ಸುಬ್ರಮಣಿ, ತೋರೆರ ಅಯ್ಯಪ್ಪ, ತೋರೆರಾ ನಳಿನಿ, ಅಪ್ಪಂಡೆರಂಡ ಕಾಳಪ್ಪ, ಮೂಕಚಂಡ ಕಾವೇರಮ್ಮ, ಕೊಟ್ರಂಡ ರೋಹಿಣಿ, ಮುಲ್ಲೇಂಗಡ ಸುರೇಶ್ ಭೀಮಯ್ಯ, ಕೊಂಗಂಡ ಪ್ರಥ್ಯು ಚೀಯಣ್ಣ ಹಾಗೂ ಮುಲ್ಲೆಂಗಡ ಮಧೂಷ್ ಪೂವಯ್ಯ, ನೆರೆಯ ಶಾಲೆಯ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.

 ಶಾಲೆಯ ಮುಖ್ಯ ಶಿಕ್ಷಕರಾದ ಪವೀನ ಎ.ಟಿ. ವಾರ್ಷಿಕ ವರದಿ ವಾಚಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಪುಟಾಣಿ ಮಕ್ಕಳಿಂದ ವೈವಿಧ್ಯಮಯ ಪ್ರದರ್ಶನಗಳು ಜರುಗಿದವು. ಕಾರ್ಯಕ್ರಮದಲ್ಲಿ ಶಿಕ್ಷಕಿ ಲಕ್ಷಿ÷್ಮ ಎಂ., ಸಹ ಶಿಕ್ಷಕ ದೇವರಾಜ್ ಬಿ.ಟಿ. ಅತಿಥಿ ಶಿಕ್ಷಕಿಯರಾದ ಶರಣ್ಯ ಮತ್ತು ಪೂರ್ಣಿಮಾ ಕಾರ್ಯಕ್ರಮ ಪೋಷಕರು, ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0