Kodagu

ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ.ಪಿ ಬಾಣೆ ಸರ್ಕಾರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ

admincoorgdaily

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮದ ಕೆ.ಪಿ.ಬಾಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷೆ ಹಾಗೂ ಪಂಚಾಯಿತಿ ಸದಸ್ಯರಾದ ಸಫಿಯಾ ರವರು ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು.

ಬಳಿಕ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಫಿಯಾ ರವರು ಪ್ರಸ್ತಾವಿಕವಾಗಿ ದಿನದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಶಾಲೆಯ ನಿವೃತ್ತ ಶಿಕ್ಷಕಿ ರೇಖಾ ಕುಮಾರಿ, ಪ್ರಭಾರ ಮುಖ್ಯ ಶಿಕ್ಷಕಿ ಸವಿತಾ, ಶಿಕ್ಷಕ ಗಣೇಶ್, ಎಸ್ ಡಿಎಂಸಿ ಸದಸ್ಯ ಇಸ್ಮಾಯಿಲ್ ದಿನದ ಮಹತ್ವದ ಕುರಿತು ಮಾತನಾಡಿದರು.

 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆದು ನೋಡುಗರನ್ನು ರಂಜಿಸಿತು.ಬಳಿಕ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಅಬ್ದುಲ್ ಹಫೀಲ್, ಶಾಲೆಯ ಎಸ್ ಡಿ ಎಂಸಿ ಸದಸ್ಯರು, ಶಾಲೆಯ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸವಿತಾ ಸ್ವಾಗತಿಸಿ, ಶಿಕ್ಷಕಿ ಪವಿತ್ರ ಸರ್ವರನ್ನು ವಂದಿಸಿದರು.