ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ ಸರ್ಕಾರಿ ಪ್ರೌಢಶಾಲೆಯಲ್ಲಿ   79ನೇ ಸ್ವಾತಂತ್ರ್ಯ ದಿನಾಚರಣೆ

ಪಾಲಿಬೆಟ್ಟ :-ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕರಾದ ಯು. ಕೆ. ಅಶ್ರಫ್ ರವರು ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ, ಭಾಷಣ, ಮನಮೋಹಕ ನೃತ್ಯ ಪ್ರದರ್ಶನ ನಡೆಸಿಕೊಟ್ಟರು. ಶಾಲೆಯ ಸಹಶಿಕ್ಷಕರಾದ ಆರತಿ ಎಸ್. ಪಿ. ರವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಾಲಿಬೆಟ್ಟದ ಆಟೋ ಚಾಲಕ ಸಂಘದ ಹಾಗೂ. ಪಾಲಿಬೆಟ್ಟ ಗ್ರಾಮ ಪಂಚಾಯಿತಿ ವತಿಯಿಂದಲೂ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮದನ್ ಕುಮಾರ್ ರವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಕವಾಯತು ನಡೆಸಲಾಯಿತು. ಸಹ ಶಿಕ್ಷಕರಾದ ನಯನಕುಮಾರಿ ರವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರಾದ ಮಮತಾ ಕಾಮತ್, ಆಶಾ, ಆರತಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.