ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 79ನೇ ಸ್ವಾತಂತ್ರ್ಯದಿನಾಚರಣೆ
ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು :ನಾಪೋಕ್ಲು ಪೊಲೀಸ್ ಠಾಣೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಠಾಣೆಯ ಉಪನಿರೀಕ್ಷಕರಾದ ಪಿ.ಜಿ.ರಾಘವೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಠಾಣೆಯ ಸಹಾಯಕ ಠಾಣಾಧಿಕಾರಿಗಳಾದ ಫ್ರಾನ್ಸಿಸ್, ಮೋಹನ್, ಪ್ರಕಾಶ್, ಠಾಣಾಸಿಬ್ಬಂದಿಗಳು ಹಾಗೂ ಗೃಹ ರಕ್ಷಕದಳ ಸಿಬ್ಬಂದಿಗಳು ಹಾಜರಿದ್ದರು.