Kodagu

ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

admincoorgdaily

ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ

ಪೊನ್ನಂಪೇಟೆ, ಆ.15: ಬಾಳೆಲೆ ವಿಜಯಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹಿರಿಯರು ಮಾಡಿದ ತ್ಯಾಗ ಹಾಗೂ ಬಲಿದಾನಗಳನ್ನು ವಿದ್ಯಾರ್ಥಿಗಳು ಗೌರವಿಸಬೇಕು. ರಾಷ್ಟ್ರೀಯತೆಯ ಮನೋಭಾವವನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಭವಿಷ್ಯದ ಭಾರತವನ್ನು ಕಟ್ಟುವಲ್ಲಿ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಉಪಾಧ್ಯಕ್ಷ ಕಿರುದಂಡ ದೇವಯ್ಯ, ಗೌರವ ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ಸಹ ಕಾರ್ಯದರ್ಶಿಗಳಾದ ಪೊಡಮಾಡ ಮೋಹನ್, ಕೋಶಾಧಿಕಾರಿ ಅಡ್ಡೇಂಗಡ ದೇವಯ್ಯ, ಸಹ ಕೋಶಾಧಿಕಾರಿ ಅಲೆಮಾಡ ಕರುಂಬಯ್ಯ, ನಿರ್ದೇಶಕರಾದ ಅದೇಂಗಡ ವಿನು ಉತ್ತಪ್ಪ, ಅಡ್ಡೇಂಗಡ ಅರುಣ, ಪೊಡಮಾಡ ಸುಕೇಶ್ ಭೀಮಯ್ಯ, ಪ್ರಾಂಶುಪಾಲರಾದ ಪ್ರತಿಭಾ ಉತ್ತಪ್ಪ, ಮುಖ್ಯಶಿಕ್ಷಕ ಚಂದ್ರಶೇಖರ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.