ವಿರಾಜಪೇಟೆ ಕರ್ನಾಟಕ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನ ಆಚರಣೆ
ವಿರಾಜಪೇಟೆ: ವಿರಾಜಪೇಟೆ ಕರ್ನಾಟಕ ಸಂಘದ ಆವರಣದಲ್ಲಿ 80 ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.
ಕರ್ನಾಟಕ ಸಂಘದ ಅಧ್ಯಕ್ಷರಾದ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಅವರು ಸಂಘದ ಆವರಣದಲ್ಲಿ ದ್ವಜಾರೋಹಣ ನೆರವೇರಿಸಿ ಬಳಿಕ ಮಾತನಾಡಿ, ಸ್ವಾತಂತ್ರ್ಯ ದಿನ ಅರ್ಥಪೂರ್ಣವಾಗಿ ಆಚರಿಸುವುದು ಮತ್ತು ಯುವ ಪೀಳಿಗೆಗೆ ದೇಶದ ಇತಿಹಾಸ, ಸಂಸ್ಕೃತಿಗ, ಕಲೆ, ಭಾಷೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಆಗಸ್ಟ್ 15, 1947 ರಂದು ನಮ್ಮ ಭಾರತ ದೇಶವು ಬ್ರಿಟಿಷರ 200 ವರ್ಷಗಳ ಗುಲಾಮಗಿರಿಯಿಂದ ಮುಕ್ತಿ ಪಡೆದು ಸ್ವತಂತ್ರವಾಯಿತು. ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ಜವಾಹರ್ ಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹ ನೂರಾರು ಮಹಾನಾಯಕರ ಮತ್ತು ಸಾವಿರಾರು ಕ್ರಾಂತಿಕಾರಿಗಳ ತ್ಯಾಗ ಹಾಗೂ ಬಲಿದಾನದ ಫಲವಾಗಿ ನಮಗೆ ಈ ಸ್ವಾತಂತ್ರ್ಯ ಸಿಕ್ಕಿದೆ. ಈ ದಿನಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಎಲ್ಲಾ ದೇಶಭಕ್ತರನ್ನು ಸ್ಮರಿಸುವುದು ನಮ್ಮ ಧರ್ಮ. ನಾವೆಲ್ಲರೂ ಒಗ್ಗೂಡಿ ಭಾರತವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯೋಣ ಎಂದರು.
ದ್ವಜಾರೋಹಣ ಸಂದರ್ಭ ಕರ್ನಾಟಕ ಸಂಘದ ಉಪಾಧ್ಯಕ್ಷ ಚೇನಂಡ.ಈ.ಗಿರೀಶ್ ಪೂಣಚ್ಚ, ಕಾರ್ಯದರ್ಶಿ ಮುಂಡ್ಯೋಳಂಡ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೋಟೆರ.ಯು.ಗಣೇಶ್ ತಮ್ಮಯ್ಯ, ನಿರ್ಧೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ.ಸುರೇಶ್ ನಾಣಯ್ಯ, ಪುಗ್ಗೇರ ನಂದ, ಎ.ಎಂ.ಜೋಯಪ್ಪ, ಮುಂಡಂಡ.ರಾಣು ಮಂದಣ್ಣ, ಬೊಳ್ಯಪಂಡ ಎಂ.ಸುರೇಶ್, ಬಾಚೀರ ಆರ್.ಗಣೇಶ್, ಕಂಜಿತAಡ ಎಂ.ಮೊಣ್ಣಪ್ಪ, ಮೂಕಚಂಡ.ಬಿ. ದೇವಯ್ಯ, ಚಾರಿಮಂಡ ಯು. ಶರಣು ನಂಜಪ್ಪ, ಬಲ್ಲಡಿಚಂಡ ಜಿ. ವಿಜು ಕುಶಾಲಪ್ಪ, ಪೋರೇರ ಎಂ. ಬಿದ್ದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
