Kodagu

ಪುಟಾಣಿನಗರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

admincoorgdaily

ಪುಟಾಣಿನಗರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

ಮಡಿಕೇರಿ: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅದರಂತೆಯೇ ಮಡಿಕೇರಿ ನಗರದ ಪುಟಾಣಿನಗರದಲ್ಲೂ ದೇಶಭಕ್ತಿಯ ಸಂಭ್ರಮ ಮನೆ ಮಾಡಿತು. ಸ್ಥಳೀಯರು, ಮಹಿಳೆಯರು, ಮಕ್ಕಳು ಸೇರಿದಂತೆ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುಟಾಣಿನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೊನ್ನಮ್ಮ ಟೀಚರ್ ಹಾಗೂ ಶಾಂತಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಗಾಯನ ನಡೆಯಿತು.

ಈ ವೇಳೆ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ, ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರಿಗೆ ಗೌರವ ನಮನ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪುಟಾಣಿನಗರದ ಹಿರಿಯ ನಾಗರಿಕರು, ಸ್ತ್ರೀ ಶಕ್ತಿ ಸಂಘದ ಸದಸ್ಯೆಯರು, ಅಂಗನವಾಡಿ ಮಕ್ಕಳು ಹಾಗೂ ಶಿಕ್ಷಕರು, ಶ್ರೀ ದುರ್ಗಾ ಪರಮೇಶ್ವರಿ ದೇವಾಲಯ ಸಮಿತಿಯ ಸದಸ್ಯರು ಮತ್ತು ಓಂ ಶ್ರೀ ಉದ್ಭವ ವಿನಾಯಕ ಸೇವಾ ಸಮಿತಿಯ ಸದಸ್ಯರು ಭಾಗವಹಿಸಿ ಸ್ವಾತಂತ್ರ್ಯ ದಿನದ ಸಂಭ್ರಮವನ್ನು ಹಂಚಿಕೊಂಡರು. ಸ್ಥಳೀಯರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ದೇಶಭಕ್ತಿಯ ವಾತಾವರಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು.