ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ಹರಿದು 09 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ ಸಿದ್ದರಾಮಯ್ಯ

Sep 13, 2025 - 09:28
 0  187
ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ಹರಿದು 09 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ ಸಿದ್ದರಾಮಯ್ಯ
Photo credit: wikipedia

ಬೆಂಗಳೂರು:ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಸಿ.ಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0